×
Ad

ರಾಜ್ಯದಲ್ಲಿ ಕೋಮು ಗಲಭೆ ನಡೆಸಲು ಸಹೋದರ ಸಂಘಟನೆಗಳನ್ನು ಅಣಿಗೊಳಿಸುತ್ತಿರುವ ಬಿಜೆಪಿ: ಬಿ.ಕೆ ಹರಿಪ್ರಸಾದ್‌ ಆರೋಪ

Update: 2024-01-06 16:48 IST

ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ಪಕ್ಷ ತನ್ನ ಸಹೋದರ ಸಂಘಟನೆಗಳನ್ನು ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ಬಿ.ಕೆ ಹರಿಪ್ರಸಾದ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ʼಎಕ್ಸ್‌ʼ ನಲ್ಲಿ ಪೋಸ್ಟ್‌ ವೊಂದನ್ನು ಹಂಚಿಕೊಂಡಿರುವ ಅವರು, ʼರೌಡಿ ಶೀಟರ್  ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಬೆ ನಡೆಸುವ ಫತ್ವಾ ಬಂದಿದೆ ಎಂದು ಸ್ವತಃ ತಾನೇ ಸೃಷ್ಟಿಸಿರುವ "ರಾಷ್ಟ್ರ ರಕ್ಷಣಾ ಪಡೆ" ಎಂಬ ವಾಟ್ಸಪ್ ಗ್ರೂಪಿನಲ್ಲಿ ಹೇಳಿಕೊಂಡಿದ್ದಾನೆ. ಕೋಮು ಗಲಭೆ ನಡೆಸಿ 2024ಕ್ಕೆ "ವಿಶ್ವಗುರುವನ್ನು" ಮತ್ತೆ ಪ್ರಧಾನಿಯಾಗಲು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆʼ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಎಲ್ಲಿ? ಯಾವಾಗಾ? ಹೇಗಾದರೂ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಸಂಚು ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಇಂತಹ ಸಮಾಜಘಾತುಕರಿಗೆ ಇಡೀ ಬಿಜೆಪಿಯೇ ಬೆಂಬಲಕ್ಕೆ ನಿಂತಿರುವುದು ಜಗಜ್ಜಾಹೀರು. ಕೂಡಲೇ ಸರ್ಕಾರ ಇಂತಹ ಭಯೋತ್ಪಾದಕ ಶಕ್ತಿಗಳನ್ನ ಮಟ್ಟ ಹಾಕಬೇಕು. ರಾಜ್ಯದ ಆಂತರಿಕ ಭದ್ರತೆಗೆ ಧಕ್ಕೆ ಉಂಟು ಮಾಡುತ್ತಿರುವವರ ಮೇಲೆ ರಾಷ್ಟ್ರದ್ರೋಹದ ಅಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News