×
Ad

ಜಂಟಿ ಅಧಿವೇಶನದಿಂದ ಹೊರನಡೆದ ರಾಜ್ಯಪಾಲರನ್ನು ಅಡ್ಡಗಟ್ಟಲು ಯತ್ನಿಸಿದ ಬಿ.ಕೆ ಹರಿಪ್ರಸಾದ್!

Update: 2026-01-22 13:21 IST

ಬೆಂಗಳೂರು: ರಾಜ್ಯ ವಿಧಾನಸಭೆಯ ವಿಶೇಷ ಜಂಟಿ ಅಧಿವೇಶನ ಗುರುವಾರ ಕೆಲವು ಪ್ರಮುಖ ಘಟನೆಗಳಿಗೆ ಸಾಕ್ಷಿಯಾಯಿತು.

ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಸರಕಾರ ಸಿದ್ಧಪಡಿಸಿದ ಭಾಷಣದಲ್ಲಿ ಕೆಲ ವಿಚಾರಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಕೊನೆಯಲ್ಲಿ ಅಧಿವೇಶನಕ್ಕೆ ಆಗಮಿಸಿದರೂ, ಕೇವಲ ಎರಡೇ ನಿಮಿಷಗಳಲ್ಲಿ ಭಾಷಣ ಮುಗಿಸಿ ವಿಧಾನಸಭೆಯಿಂದ ಹೊರನಡೆದಿದ್ದಾರೆ.

ಈ ನಡೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ರಾಜ್ಯಪಾಲರನ್ನು ಅಡ್ಡಗಟ್ಟಿ ಹೊರ ಹೋಗದಂತೆ ತಡೆಯಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಈ ವೇಳೆ ಮಾರ್ಷಲ್ ಗಳು ಹರಿಪ್ರಸಾದ್ ಅವರನ್ನು ಹಿಂದಕ್ಕೆಳೆದು ರಾಜ್ಯಪಾಲರಿಗೆ ದಾರಿ ಮಾಡಿಕೊಟ್ಟಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್ ಅಶೋಕ್ “ಕೇಂದ್ರ ಸರಕಾದ ವಿರುದ್ಧ ಮಾತನಾಡಲು ರಾಜ್ಯಪಾಲರ ಮೇಲೆ ಒತ್ತಡವಿದೆ. ಕಾಂಗ್ರೆಸ್ ನವರಿಗೆ ತಮ್ಮದೇ ಆದ ಕಾರ್ಯಸೂಚಿ ಇದೆ. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ನಾವು ಕೇಂದ್ರ ಸರ್ಕಾರದ ವಿರುದ್ಧ ಹೋರಾಡುತ್ತಿದ್ದೇವೆ ಎಂದು ತಿಳಿಸುವುದು ಅವರ ಉದ್ದೇಶವಾಗಿದೆ ಎಂದು ಆರೋಪಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News