ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ; ಪ್ರಕರಣ ದಾಖಲು
Update: 2023-12-12 12:15 IST
Photo: ANI
ಬೆಂಗಳೂರು: ರಾಜಭವನದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ಶೋಧ ನಡೆಸಿ, ಇದೊಂದು ಹುಸಿ ಕರೆ ಎಂಬ ಮಾಹಿತಿ ನೀಡಿದ್ದಾರೆ.
ದೊಮ್ಮಲೂರಿನಲ್ಲಿರುವ ಎನ್ ಐ ಎ ನಿಯಂತ್ರಣ ಕೊಠಡಿಗೆ ಸೋಮವಾರ ರಾತ್ರಿ 11.30ರ ವೇಳೆಗೆ ಅಪರಿಚಿತ ಕರೆ ಬಂದಿದ್ದು, ರಾಜಭವನದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಸಲಾಗಿತ್ತು. ಕೂಡಲೇ ಕಾರ್ಯ ಪ್ರವೃತ್ತರಾದ ಸ್ಥಳೀಯ ಪೊಲೀಸರು ರಾಜಭವನಕ್ಕೆ ಭೇಟಿ ನೀಡಿ ಶೋಧ ನಡೆಸಿದ್ದಾರೆ
'ರಾಜಭವನದಲ್ಲಿ ಅನುಮಾನಾಸ್ಪದವಾಗಿ ಯಾವುದೇ ವಸ್ತು ಪತ್ತೆಯಾಗಿಲ್ಲ. ಇದೊಂದು ಹುಸಿ ಬೆದರಿಕೆ ಕರೆಯಾಗಿದ್ದು, ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕರೆ ಮಾಡಿರುವವರು ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ' ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.