×
Ad

ತಮ್ಮನಿಂದಲೇ ಅಣ್ಣನ ಕೊಲೆ

Update: 2023-10-24 18:40 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.24: ತಮ್ಮನಿಂದಲೇ ಅಣ್ಣನೊಬ್ಬ ಕೊಲೆಯಾದ ಘಟನೆ ದೊಡ್ಡಬಳ್ಳಾಪುರದ ದೊಡ್ಡಮಂಕಲಾಳದಲ್ಲಿ ವರದಿಯಾಗಿದೆ.

ದೊಡ್ಡಮಂಕಲಾಳದ ಗಂಗರಾಜು(35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ರವಿ ಕೊಲೆ ಆರೋಪಿಯಾಗಿದ್ದು, ಆತ ಕೃತ್ಯ ಎಸಗಿ ಪರಾರಿಯಾಗಿದ್ದಾನೆನ್ನಲಾಗಿದೆ. 

ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಎಸ್‍ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಸಂಬಂಧ ದೊಡ್ಡಬೆಳವಂಗಲ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಗೊತ್ತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News