×
Ad

ರಾಜ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿದ್ದು ಬಿಎಸ್ ವೈ, ಅನಂತ್‍ಕುಮಾರ್: ಬಿ.ವೈ.ವಿಜಯೇಂದ್ರ

Update: 2023-11-12 20:43 IST

ಬೆಂಗಳೂರು, ನ. 12: ರಾಜ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಹಿರಿಯ ರಾಜಕೀಯ ಮುತ್ಸದ್ದಿ ಅನಂತ್ ಕುಮಾರ್ ಕಾರಣ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ್ಣಿಸಿದ್ದಾರೆ.

ರವಿವಾರ ನಗರದ ಲಾಲ್‍ಬಾಗ್‍ನಿಂದ ಅದಮ್ಯ ಚೇತನದ ವರೆಗೆ ಆಯೋಜಿಸಿದ್ದ 4ನೆ ‘ಅನಂತ ಸ್ಮøತಿ’ ನಡಿಗೆ ಮತ್ತು ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಅನಂತ್ ಕುಮಾರ್ ಅವರ ಪರಿಶ್ರಮವನ್ನು ಮರೆಯಲು ಸಾಧ್ಯವೇ ಇಲ್ಲ ಎಂದರು.

ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ಅವರು ಪಕ್ಷದ ಸಂಘಟನೆ ಬಗ್ಗೆ ಸದಾ ಕಾಲ ಚರ್ಚಿಸುತ್ತಿದ್ದರು. ರಾಜ್ಯದಲ್ಲಿ ಪಕ್ಷ ಸಂಘಟನೆ ಬಲಿಷ್ಠಗೊಳ್ಳಲು ಈ ಇಬ್ಬರೂ ನಾಯಕರ ಪರಿಶ್ರಮ ಅನನ್ಯ.ಅಷ್ಟೇ ಮಾತ್ರವಲ್ಲದೆ, ಇವರ ನಡುವೆ ಅವಿನಾಭಾವ ಸಂಬಂಧವಿತ್ತು ಎಂದು ಅವರು ನುಡಿದರು.

ಅದಮ್ಯ ಚೇತನ ಮುಖ್ಯಸ್ಥೆ ತೇಜಸ್ವಿನಿ ಅನಂತ್ ಕುಮಾರ್ ಮಾತನಾಡಿ, ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಆಯ್ಕೆಯಾಗಿ ಬೆಂಗಳೂರಿಗೆ ಹೊಸ ಸ್ವರೂಪ, ಅಭಿವೃದ್ಧಿಗೆ ಹೊಸ ಬೆಳಕು ನೀಡಿದ್ದರು. ಅನಂತ ಕುಮಾರ್ ಅವರ ನೇತೃತ್ವ, ಅವರ ಕತೃತ್ವವನ್ನು ಸ್ಮರಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಕೆ.ಸಿ.ರಾಮಮೂರ್ತಿ, ರವಿ ಸುಬ್ರಮಣ್ಯ, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷ ಪೆÇ್ರ.ಪಿ.ವಿ.ಕೃಷ್ಣ ಭಟ್ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News