ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಸದನದ ಅಭಿನಂದನೆ
Update: 2026-03-09 17:56 IST
PC: x.com/ICC
ಬೆಂಗಳೂರು : ಸತತ ಎರಡನೇ ಬಾರಿಗೆ ಟಿ-20 ವಿಶ್ವಕಪ್ ಟ್ರೂಫಿ ಗೆದ್ದ ಭಾರತ ತಂಡಕ್ಕೆ ವಿಧಾನಸಭೆ ಕಲಾಪದಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ಸೋಮವಾರ ವಿಧಾನಸಭೆಯಲ್ಲಿ ಸಂತಾಪ ಸೂಚನೆ ನಿರ್ಣಯ ಮಂಡನೆ ಬಳಿಕ ಜೆಡಿಎಸ್ ಸದಸ್ಯ ಸಿ.ಎನ್.ಬಾಲಕೃಷ್ಣ ಅವರು ಟಿ-20 ವಿಶ್ವಕಪ್ ಟ್ರೂಫಿ ಗೆದ್ದ ನಮ್ಮ ಕ್ರಿಕೆಟ್ ತಂಡಕ್ಕೆ ಆಭಿನಂದನೆ ಸಲ್ಲಿಸಬೇಕು ಎಂದು ವಿಷಯ ಪ್ರಸ್ತಾಪಿಸಿದರು.
ಈ ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು.ಟಿ.ಖಾದರ್ ಅವರು, ಟೀಮ್ ಇಂಡಿಯಾ ಸತತ ಎರಡನೆ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಗೆದ್ದಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿ. ಹೀಗಾಗಿ ಭಾರತ ತಂಡಕ್ಕೆ ಸದವು ಅಭಿನಂದನೆ ಸಲ್ಲಿಸಲಿದೆ ಎಂದು ಪ್ರಕಟಿಸಿದರು. ಇದಕ್ಕೆ ಪಕ್ಷಭೇದ ಮರೆತು ಎಲ್ಲ ಸದಸ್ಯರು ಮೇಜುತಟ್ಟಿ ಸ್ವಾಗತಿಸಿದರು.