×
Ad

ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ಸೇರಿದಂತೆ ಮೂರು ವಿಧೇಯಕಗಳ ಮಂಡನೆ

Update: 2026-03-10 21:07 IST

ಬೆಂಗಳೂರು : ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ ಸೇರಿದಂತೆ ಮೂರು ವಿಧೇಯಕಗಳನ್ನು ಮಂಡನೆ ಮಾಡಲಾಯಿತು.

ಮಂಗಳವಾರ ವಿಧಾನಸಭೆಯ ಶಾಸನ ರಚನೆ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, 2026ನೆ ಸಾಲಿನ ಕರ್ನಾಟಕ ಲೋಕಾಯುಕ್ತ(ತಿದ್ದುಪಡಿ) ವಿಧೇಯಕ ಮಂಡನೆ ಮಾಡಿದರು. ಬಳಿಕ ತಮ್ಮದೇ ಇಲಾಖೆಯ 2026ನೆ ಸಾಲಿನ ಕರ್ನಾಟಕ ಜ್ಞಾನಭಂಡಾರ ಹಸ್ತಪ್ರತಿಗಳು ಮತ್ತು ಡಿಜಿಲೀಕರಣ ವಿಧೇಯಕ ಮಂಡಿಸಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು 2026ನೆ ಸಾಲಿನ ಕರ್ನಾಟಕ ಪೊಲೀಸು ತಿದ್ದುಪಡಿ ವಿಧೇಯಕ ಮಂಡನೆ ಮಾಡಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News