×
Ad

ದೇಶದ ಆರ್ಥಿಕತೆಯನ್ನು ಮತ್ತಷ್ಟು ಸದೃಢಗೊಳಿಸುವ ಬಜೆಟ್: ಯಡಿಯೂರಪ್ಪ

Update: 2024-02-01 13:18 IST

ಬೆಂಗಳೂರು, ಫೆ.1: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ 2ನೇ ಅವಧಿಯ ಕೊನೆಯ ಆಯವ್ಯಯವನ್ನು 'ಪ್ರಗತಿನಿಷ್ಠ ಬಜೆಟ್' ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದ್ದಾರೆ.

ಈ ಬಗ್ಗೆ 'X' ನಲ್ಲಿ ಸಂದೇಶ ಪೋಸ್ಟ್ ಮಾಡಿರುವ ಯಡಿಯೂರಪ್ಪ, ನವಭಾರತದ ಪರಿಕಲ್ಪನೆಯ ಸಾಕಾರದ ನಿಟ್ಟಿನಲ್ಲಿ, ದೇಶದ ಆರ್ಥಿಕತೆಯನ್ನು ಮತ್ತಷ್ಟು ಸದೃಢಗೊಳಿಸುವ ಬಜೆಟ್ ಇದಾಗಿದೆ ಎಂದು ಹೇಳಿದ್ದಾರೆ.

ಚುನಾವಣಾಪೂರ್ವ ಜನಪ್ರಿಯ ಘೋಷಣೆಗಳ ಬಜೆಟ್ ಮಂಡಿಸದೆ, ಈ ಮಧ್ಯಂತರ ಬಜೆಟ್ ಮೂಲಕ ನಮ್ಮ ಯುವಜನತೆ, ರೈತರು, ಮಹಿಳೆಯರು ಹಾಗೂ ವಿಶೇಷವಾಗಿ ಹಿಂದುಳಿದ ಮತ್ತು ದುರ್ಬಲ ವರ್ಗದ ಜನರ ಜೀವನಮಟ್ಟ ಸುಧಾರಿಸುವ, ಹೊಸ ಭರವಸೆ, ಅವಕಾಶಗಳನ್ನು ಸೃಷ್ಟಿಸುವ ವಾಸ್ತವಿಕ ಆಯವ್ಯಯವನ್ನು ಕೇಂದ್ರ ವಿತ್ತ ಸಚಿವೆ ಮಂಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸದೃಢ, ಸಶಕ್ತ, ವಿಕಸಿತ, ವಿಶ್ವಗುರು ಭಾರತ ನಿರ್ಮಾಣದ ನಿಟ್ಟಿನಲ್ಲಿ ಎನ್.ಡಿ.ಎ ಸರ್ಕಾರದ ಬದ್ಧತೆಯನ್ನು ಈ ಬಜೆಟ್ ಪುನರುಚ್ಚರಿಸಿದ್ದು, ದೇಶದ ಪ್ರಗತಿಗೆ ಪೂರಕವಾಗಿದೆ. ಈ ಬಜೆಟ್ ಅನ್ನು ಸ್ವಾಗತಿಸುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News