×
Ad

ಬುರ್ಖಾ ತೊಟ್ಟು ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಕುಳಿತಿದ್ದ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Update: 2023-07-06 21:36 IST

ಹುಬ್ಬಳ್ಳಿ: ಮಹಿಳೆಯರ ಬುರ್ಖಾ ಧರಿಸಿ ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ  ಗುರುವಾರ ವರದಿಯಾಗಿದೆ.

ಬುರ್ಖಾ ತೊಟ್ಟಿದ್ದ ವ್ಯಕ್ತಿಯನ್ನು  ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಡಗೇರಿ ನಿವಾಸಿ ವೀರಭದ್ರಯ್ಯ ಎಂದು ಗುರುತಿಸಲಾಗಿದೆ. 

ಬಸ್‌ ನಿಲ್ದಾಣದಲ್ಲಿ ಕುಳಿತಿದ್ದ ವೀರಭದ್ರಯ್ಯನ ಚಲನವಲನ ಗಮನಿಸಿದ ಗ್ರಾಮಸ್ಥರಿಗೆ, 'ಶಕ್ತಿ ಯೋಜನೆ' ಲಾಭ ಪಡೆಯಲು ಬುರ್ಖಾ ಧರಿಸಿದ್ದ ಎಂದು ಅನುಮಾನಿಸಿ ಹಿಡಿದಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವೀರಭದ್ರಯ್ಯನ ಬಳಿ ಮಹಿಳೆಯರ ಆಧಾರ್‌ ಕಾರ್ಡ್‌ ಕೂಡ ಪತ್ತೆಯಾಗಿದೆ ಎನ್ನಲಾಗಿದೆ.

ಇನ್ನು ವಿಚಾರಣೆ ವೇಳೆ ಭಿಕ್ಷಾಟನೆಗೆ ತಾನು ಬುರ್ಖಾ ಹಾಕಿದ್ದಾಗಿ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News