×
Ad

ಸ್ಕೂಟರ್ ಗೆ ಬಸ್ ಢಿಕ್ಕಿ; ವಿದ್ಯಾರ್ಥಿನಿ ಸಾವು

Update: 2023-07-04 11:59 IST

ಬೆಂಗಳೂರು: ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಪೀಣ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತ ವಿದ್ಯಾರ್ಥಿನಿಯನ್ನು ದಿಶಾ(18) ಎಂದು ಗುರುತಿಸಲಾಗಿದೆ. ಮಲ್ಲೇಶ್ವರದ ಎಂಇಎಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪಿಸಿಎಂ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ದಿಶಾ, ಕಾಲೇಜಿಗೆ ಹೋಗುವ ಸಲುವಾಗಿ ನಾಗಸಂದ್ರದಿಂದ ತಂದೆ ಜೊತೆ ಸ್ಕೂಟರ್ ನಲ್ಲಿ ಬೆಳಗ್ಗೆ ಸುಮಾರು 6.30ರ ವೇಳೆಗೆ ಜಾಲಹಳ್ಳಿ ಕ್ರಾಸ್ ಬಳಿ ಬರುತ್ತಿದ್ದರು. ಧರ್ಮಸ್ಥಳದಿಂದ ನಗರದ ಕಡೆಗೆ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿ ತಂದೆ-ಮಗಳು ಕೆಳಗೆ ಬಿದ್ದಿದ್ದರು. ಅಪಘಾತದಲ್ಲಿ ದಿಶಾ ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ದಿಶಾ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅದೃಷ್ಣವಶಾತ್ ತಂದೆ ಬಚಾವ್ ಆಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೀಣ್ಯ ಪೊಲೀಸರು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News