×
Ad

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ | ನ.13ಕ್ಕೆ ವೇತನ ಸಹಿತ ರಜೆ ಘೋಷಣೆ

Update: 2024-10-22 21:33 IST

ಬೆಂಗಳೂರು: ಮೂರು ಕ್ಷೇತ್ರಗಳಾದ ಶಿಗ್ಗಾಂವ್, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳಲ್ಲಿ ನ.13ರಂದು ಉಪಚುನಾವಣೆ ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತ ಅರ್ಹ ಮತದಾರರಾಗಿರುವ ಎಲ್ಲ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಲಾಗಿದೆ.

ಚುನಾವಣೆಯ ನಡೆಯುವ ಕ್ಷೇತ್ರಗಳಲ್ಲಿ ಮತ ಚಲಾಯಿಸುವ ಅರ್ಹ ಕಾರ್ಮಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳ ಮಾಲಕರು ವೇತನ ಸಹಿತ ರಜೆ ನೀಡುವಂತೆ ಆದೇಶಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ/ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಕಾರ್ಮಿಕ ಇಲಾಖೆಯ ಆಯುಕ್ತರು ಎಚ್ಚರಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News