×
Ad

ಉಪಚುನಾವಣೆ | ರಾಜ್ಯದ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಮುನ್ನಡೆ

Update: 2024-11-23 10:47 IST

ಬೆಂಗಳೂರು : ಉಪಚುನಾವಣೆ ನಡೆದ ರಾಜ್ಯದ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದು, ವಿಪಕ್ಷ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಹಿನ್ನಡೆ ಅನುಭವಿಸುತ್ತಿದೆ.

ಚನ್ನಪಟ್ಟಣ , ಸಂಡೂರು ಮತ್ತು ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಮುನ್ನಡೆಯಲ್ಲಿ ಇದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ 18 ಸಾವಿರ ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದು, ನಿಖಿಲ್‌ಗೆ ಆಘಾತ ಉಂಟಾಗಿದೆ.

ಸಂಡೂರಿನಲ್ಲಿ ಆರಂಭದಿಂದಲೂ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ಮುನ್ನಡೆಯಲ್ಲಿ ಇದ್ದು, ಬಂಗಾರು ಹನುಮಂತು ಹಿನ್ನಡೆ ಅನುಭವಿಸುತ್ತಿದ್ದಾರೆ. ಶಿಗ್ಗಾಂವಿಯಲ್ಲಿ ಹಾವು ಏಣಿ ಆಟದಲ್ಲಿ ಭರತ್‌ ಬೊಮ್ಮಾಯಿ ಮತ್ತು ಯಾಸಿರ್‌ ಖಾನ್‌ ಮಧ್ಯೆ ಬಿರುಸಿನ ಸ್ಪರ್ಧೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News