×
Ad

‌ಉಪ ಚುನಾವಣೆ | ಶಿಗ್ಗಾಂವಿಯಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್‌

Update: 2024-10-24 17:43 IST

ಯಾಸಿರ್ ಅಹ್ಮದ್ ಖಾನ್ ಪಠಾಣ್ 

ಬೆಂಗಳೂರು : ಉಪ ಚುನಾವಣೆ ನಡೆಯಲಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರ ಹೆಸರು ಷೋಷಣೆಯಾಗಿದೆ.‌ ಆ ಮೂಲಕ ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿಗೆ ಯಾಸಿರ್ ಖಾನ್‌ ಪಠಾಣ್ ಎದುರಾಳಿಯಾಗಿದ್ದಾರೆ.

ಉಪ ಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಗಳಿಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಹೆಸರನ್ನು ಈಗಾಗಲೇ ಘೋಷಿಸಿದೆ.

ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‍ಗಾಗಿ ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಂಜೀವ್ ನೀರಲಗಿ, ಮಾಜಿ ಸಚಿವ ಆರ್.ಶಂಕರ್, ಸಯ್ಯದ್ ಅಜ್ಜಂಪೀರ್ ಖಾದ್ರಿ, ವಿನಯ್ ಅಸೂಟಿ, ಶಾಸಕ ವಿನಯ್ ಕುಲಕರ್ಣಿ ಅವರ ಪುತ್ರಿ ವೈಶಾಲಿ ಕುಲಕರ್ಣಿ ಸೇರಿದಂತೆ ಇನ್ನಿತರ ಹೆಸರುಗಳು ಚಾಲ್ತಿಯಲ್ಲಿದ್ದವು. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಮಣೆ ಹಾಕಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News