ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ : ಬಿ.ವೈ.ವಿಜಯೇಂದ್ರ

Update: 2026-07-25 18:17 IST

ಬೆಂಗಳೂರು : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ತಳೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಪ್ರಧಾನ್ ಅವರು ವಿದ್ಯಾರ್ಥಿ ದೆಸೆಯಿಂದಲೇ ನಿರಂತರ ಹೋರಾಟ ಮಾಡಿಕೊಂಡು ಬಂದವರು. ಈ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಧ್ವನಿಯಾಗಿ ಪ್ರಧಾನ್ ಕೆಲಸ ಮಾಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ದುರಾದೃಷ್ಟಕರ ಬೆಳವಣಿಗೆಗಳಾಗಿದ್ದು, ಪ್ರಧಾನ್ ವಿದ್ಯಾರ್ಥಿಗಳ ಭಾವನೆಗಳಿಗೆ ಬೆಲೆ ಕೊಟ್ಟು, ರಾಜೀನಾಮೆ ನಿರ್ಧಾರ ಮಾಡಿದ್ದಾರೆ ಎಂದರು.

ದಿಲ್ಲಿಯಲ್ಲಿ ನೀಟ್ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವ ವೇಳೆ ಕಾಂಗ್ರೆಸ್ ನಾಯಕರು ಆ ಹೋರಾಟವನ್ನು ಬೆಂಬಲಿಸುವ ನೆಪದಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದರು. ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು, ಕಾಂಗ್ರೆಸ್, ಈ ಹೋರಾಟವನ್ನು ಕೇಂದ್ರದ ವಿರುದ್ಧದ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಯತ್ನಿಸಿತು ಎಂದು ಅವರು ದೂರಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News