×
Ad

ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆಗಳು ಆಗಲಿವೆ : ವಿಜಯೇಂದ್ರ

Update: 2024-10-10 17:24 IST

ಬೆಂಗಳೂರು : ‘ಮುಂಬರುವ ಕೆಲವೇ ದಿನಗಳಲ್ಲಿ ರಾಜಕೀಯದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆಗಳು ಆಗಲಿವೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದ್ದಾರೆ.

ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಾಣುತ್ತಿದ್ದೇವೆ. ದಸರಾ ಬಳಿಕ ಮುಖ್ಯಮಂತ್ರಿ ಬದಲಾವಣೆ ಎಂಬ ಬಗ್ಗೆಯೂ ನಾನು ಈ ಹಿಂದೆಯೇ ಹೇಳಿದ್ದೇನೆ ಎಂದು ಸ್ಪಷ್ಟಣೆ ನೀಡಿದರು.

ಪಕ್ಷದ ಹಿರಿಯರಿಗೆ ನನ್ನನ್ನು ಅರ್ಥ ಮಾಡಿಕೊಳ್ಳಲು ಸಮಯಬೇಕು. ಹಾಗಾಗಿ ನಮ್ಮ ಪಕ್ಷದವರ ಹೇಳಿಕೆಗಳನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಭಾವಿಸುವುದು ತಪ್ಪಾಗುತ್ತದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದಾಗಿ ಹೇಳಿದ್ದೇನೆ. ಮುಂಬರುವ ದಿನಗಳಲ್ಲಿ ಎಲ್ಲವೂ ಒಳ್ಳೆಯದಾಗಲಿದೆ ಎಂದು ಅವರು ಉತ್ತರ ಕೊಟ್ಟರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News