×
Ad

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಕ್ಕೆ ಸಚಿವ ಸಂಪುಟ ಒಪ್ಪಿಗೆ?

Update: 2025-12-11 22:31 IST

File Photo: PTI

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಟವಾಡಲು ಕೆಲ ಷರತ್ತುಗಳ ಅನ್ವಯ ಅನುಮತಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ.

ಗುರುವಾರ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೇಲ್ಕಂಡ ತೀರ್ಮಾನ ಕೈಗೊಳ್ಳಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸಲು ಜನಾಭಿಪ್ರಾಯ ಸಂಗ್ರಹದ ಜೊತೆಯಲ್ಲಿ ನಿಯಮಗಳನ್ನು ರೂಪಿಸಲು ಗೃಹ ಸಚಿವರಿಗೆ ಸೂಚಿಸಲಾಗಿದೆ ಎಂದು ಹೇಳಲಾಗಿದೆ.

ಕಾಲ್ತುಳಿತ ಪ್ರಕರಣದ ಹಿನ್ನಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ಅವರ ವರದಿಯನ್ನೂ ಪರಿಗಣಿಸಿ ಷರತ್ತುಗಳ ಅನ್ವಯ ಕ್ರಿಕೆಟ್ ಪಂದ್ಯ ಏರ್ಪಡಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News