×
Ad

ಮಂಗಳೂರಿನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿ ಟೆಕ್ ಪಾರ್ಕ್ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ : ಪ್ರಿಯಾಂಕ್ ಖರ್ಗೆ

Update: 2025-10-09 19:59 IST

 ಪ್ರಿಯಾಂಕ್ ಖರ್ಗೆ

ಬೆಂಗಳೂರು, ಅ.9: ಮಂಗಳೂರಿನ ದೇರೆಬೈಲ್‍ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ದೇರೆಬೈಲ್‍ನ ಬ್ಲೂಬರ್ರಿ ಹಿಲ್ಸ್ ರಸ್ತೆಯ ಸರ್ವೇ ನಂಬರ್ 129 ಮತ್ತು 113 ರಲ್ಲಿನ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ (ಡಿಬಿಎಫ್‍ಒಟಿ) ಆಧಾರದ ಮೇಲೆ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News