ನಂದಿಗಿರಿಧಾಮದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಬೆಂಗಳೂರಿಗೆ ಸ್ಥಳಾಂತರ
Update: 2025-06-18 14:50 IST
ಸಾಂದರ್ಭಿಕ ಚಿತ್ರ
ಬೆಂಗಳೂರು : ನಂದಿಗಿರಿಧಾಮದಲ್ಲಿ ಗುರುವಾರ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಬುಧವಾರ ದಿಢೀರ್ ರದ್ದು ಮಾಡಲಾಗಿದ್ದು, ನಾಳೆ ವಿಧಾನಸೌಧದಲ್ಲೇ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ.
ಸಚಿವ ಸಂಪುಟದ 13ನೇ ಸಭೆಯನ್ನು ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ನಡೆಸಲು ಸರಕಾರ ತಿರ್ಮಾನ ಮಾಡಿತ್ತು.
ಕೊನೆಯ ಕ್ಷಣದಲ್ಲಿ ಚಿಕ್ಕಬಳ್ಳಾಪುರದ ನಂದಿಗಿರಿಧಾಮದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ. ಯಾವ ಕಾರಣಕ್ಕೆ ಸ್ಥಳಾಂತರಿಸಲಾಗಿದೆ ಎನ್ನುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.