×
Ad

ಸಾರ್ವಜನಿಕ ಸ್ಥಳಗಳಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳ ನಿಯಂತ್ರಣ; ಮೇಲ್ಮನವಿ ಸಲ್ಲಿಸಲು ಸಂಪುಟ ತೀರ್ಮಾನ

Update: 2025-10-30 22:33 IST

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಸಂಬಂಧ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಮೇಲ್ಮನವಿ ಸಲ್ಲಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಜರುಗಿದ ಸಚಿವ ಸಂಪುಟ ಸಭೆಯ ಬಳಿಕ ಈ ಕುರಿತು ಮಾಹಿತಿ ನೀಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್, ಸಾರ್ವಜನಿಕ ಸ್ಥಳಗಳಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳನ್ನು ನಿಷೇಧಿಸಿ ಸರಕಾರ ಇತ್ತೀಚೆಗೆ ಆದೇಶ ಹೊರಡಿಸಿದ್ದು, ಅದಕ್ಕೆ ಧಾರವಾಡ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ. ಆ ಹಿನ್ನೆಲೆಯಲ್ಲಿ ತಡೆಯಾಜ್ಞೆ ತೆರವುಗೊಳಿಸಲು ಮೇಲ್ಮನವಿ ಸಲ್ಲಿಸಲು ಸಂಪುಟ ನಿರ್ಧರಿಸಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News