×
Ad

11 ಗ್ರಾ.ಪಂ.ಗಳು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ : ಸಂಪುಟ ನಿರ್ಧಾರ

Update: 2025-11-27 19:58 IST

ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳ 11 ಗ್ರಾಮ ಪಂಚಾಯಿತಿಗಳು, ಒಂದು ಪಟ್ಟಣ ಪಂಚಾಯಿತಿ ಹಾಗೂ ಒಂದು ಪುರಸಭೆಯನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಗ್ರಾ.ಪಂ.ಯಿಂದ ಪ.ಪಂ: ಬೀದರ್ ಜಿಲ್ಲೆಯ ಕಮಠಾಣಾ ಗ್ರಾಮ ಪಂಚಾಯಿತಿ, ಮನ್ನಾಎಖೇಳ್ಳಿ ಗ್ರಾ.ಪಂ., ಹುಲಸೂರು ಗ್ರಾ.ಪಂ., ಬೆಳಗಾವಿ ಜಿಲ್ಲೆಯ ಅಂಕಲಿ ಗ್ರಾ.ಪಂ., ಸುರೇಬಾನ ಮತ್ತು ಮನಿಹಾಳ ಗ್ರಾ.ಪಂ., ಕಟಕೋಳ ಗ್ರಾ.ಪಂ., ಮೈಸೂರು ಜಿಲ್ಲೆಯ ಸಾಲಿಗ್ರಾಮ ಗ್ರಾ.ಪಂ., ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತ್ಯಾಮಗೊಂಡ್ಲು ಗ್ರಾ.ಪಂ., ಯಾದಗಿರಿ ಜಿಲ್ಲೆಯ ಸಗರ (ಬಿ)ಗ್ರಾ.ಪಂ., ಉತ್ತರ ಕನ್ನಡ ಜಿಲ್ಲೆಯ ಮಾವಳ್ಳಿ-1 ಮತ್ತು ಮಾವಳ್ಳಿ-2 ಗ್ರಾ.ಪಂ. ಹಾಗೂ ಯಾದಗಿರಿ ಜಿಲ್ಲೆಯ ವಡಗೇರಾ ಗ್ರಾ.ಪಂ.ಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ.

ಅದೇ ರೀತಿ, ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಯನ್ನು ನಗರಸಭೆ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ.

ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆ: ‘ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಕೆಲವು ನಗರ ಸ್ಥಳೀಯ ಸಂಸ್ಥೆಗಳನ್ನು ಮತ್ತು ಕೆಲವು ಗ್ರಾಮಗಳನ್ನು ಸೇರ್ಪಡೆಗೊಳಿಸಿ ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ರಚನೆ ಮಾಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ’

-ಎಚ್.ಕೆ.ಪಾಟೀಲ್, ಕಾನೂನು ಸಚಿವ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News