×
Ad

ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ | ಮೈಸೂರು ಪ್ರಾದೇಶಿಕ ವಿಭಾಗದಲ್ಲಿ 3647 ಕೋಟಿ ರೂ. ಮೌಲ್ಯದ ಕಾಮಗಾರಿಗೆ ಅನುಮೋದನೆ

Update: 2025-04-24 17:33 IST

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.

ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಲಬುರಗಿ ವಿಭಾಗದ ಸಂಪುಟ ಸಭೆ ಬಳಿಕ ಇಂದು ಮೈಸೂರು ಪ್ರಾದೇಶಿಕ ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಮೈಸೂರು ಪ್ರಾದೇಶಿಕ ವಿಭಾಗದಲ್ಲಿ 3647 ಕೋಟಿ 42 ಲಕ್ಷ ರೂ. ಮೌಲ್ಯದ ಕಾಮಗಾರಿಗೆ ಸಂಪುಟ ಅಂಗೀಕಾರ ನೀಡಿದ್ದು,  ಗಿರಿಜನ, ಪರಿಶಿಷ್ಟ ವರ್ಗದ ಹಳ್ಳಿಗಳ ರಸ್ತೆಗಳಿಗೆ 1787 ಕೋಟಿ ರೂ. ಮೊತ್ತದ ನೀರಾವರಿ, ಎಸ್‌ಸಿ/ಎಸ್‌ಟಿ ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಿದರು.

ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ. ರೈಲ್ವೇ ಬ್ಯಾರಿಕೇಡ್ ಪೂರ್ಣಗೊಳಿಸಲಾಗುವುದು. ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ ಒದಗಿಸಲಾಗುವುದು ಎಂದರು.

ಚಾಮರಾಜನಗರದಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಫತ್ರೆ ಇರುವ ಹಿನ್ನಲೆಯಲ್ಲಿ ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟದ ಅಂಗೀಕಾರ ದೊರತಿದ್ದು, 250 ಬೆಡ್ ಗಳ ಜಿಲ್ಲಾಸ್ಪತ್ರೆ ನಿರ್ಮಾಣವಾಗಲಿದೆ ಎಂದರು.

ಹನೂರಿನಲ್ಲಿ ತಾಲ್ಲೂಕು ಆಸ್ಪತ್ರೆ, ತಾಲ್ಲೂಕು ಭವನ ನಿರ್ಮಾಣ. ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಪ್ರಾಧಿಕಾರ ರಚನೆ, ವರುಣಾದ ಇಲವಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ಕೊಡಲು ಸಂಪುಟ ಅನುಮತಿ ನೀಡಿದೆ ಎಂದರು.

ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲಾಗುವುದು. ಮೈಸೂರಿನ ಅಟಾರ್ಹಾ ಕಚೇರಿಯ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಯಿತು ಎಂದು ತಿಳಿಸಿದರು.

ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ. ಚಾಮರಾಜನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ. ಒಟ್ಟಾಗಿ, 3647.62 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ ತುರ್ತು ಅಭಿವೃಧ್ಧಿ ಕಾರ್ಯಗಳು ನಡೆಯಲಿವೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News