ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜೂ.13ರಂದು ಸಚಿವ ಸಂಪುಟ ಸಭೆ; ಮಹತ್ವದ ವಿಷಯಗಳ ಕುರಿತು ಚರ್ಚೆ ಸಾಧ್ಯತೆ
Update: 2024-06-08 20:37 IST
File Photo
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜೂ.13ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌದಲ್ಲಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ. ಲೋಕಸಭೆ, ವಿಧಾನಪರಿಷತ್ ಚುನಾವಣೆಗೆ ನೀತಿ ಸಂಹಿತೆ ಘೋಷಣೆಯಾದ ಬಳಿಕ ನಡೆಯುತ್ತಿರುವ ಈ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ.
ಸಚಿವ ನಾಗೇಂದ್ರ ರಾಜೀನಾಮೆ ನೀಡಿದಂತಹ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಮಟ್ಟದಲ್ಲಿ ಸಾಧನೆ ಮಾಡಲು ವಿಫಲವಾಗಿದ್ದು, ವಿಧಾನಮಂಡಲದ ಮಳೆಗಾಲದ ಅಧಿವೇಶನ ಕರೆಯುವ ಸಂಬಂಧವೂ ಚರ್ಚೆಯಾಗಲಿದೆ ಎಂದು ತಿಳಿದು ಬಂದಿದೆ.