×
Ad

ಸಾಮಾಜಿಕ ನ್ಯಾಯದ ಪರ ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್

Update: 2023-07-24 16:31 IST

ಬೆಂಗಳೂರು: ಕಾಂಗ್ರೆಸ್ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ ಎನ್ನಲಾಗುತ್ತಿರುವ ತಮ್ಮ ಹೇಳಿಕೆಯ ಬಗ್ಗೆ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಸ್ಪಷ್ಟೀಕರಣ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾನು ವೈಯಕ್ತಿಕ ಹಿತಾಸಕ್ತಿಗೆ ಎಂದೂ ರಾಜಕೀಯ ಮಾಡಿದವನಲ್ಲ, ಸಾಮಾಜಿಕ ಬದಲಾವಣೆಗಾಗಿ ರಾಜಕೀಯಕ್ಕೆ ಬಂದವನು. ಮಂತ್ರಿ, ಮುಖ್ಯಮಂತ್ರಿ ಸೇರಿದಂತೆ ಯಾವ ಅಧಿಕಾರದ ಮೇಲೂ ಲಾಭಿ ನಡೆಸಿದ ಇತಿಹಾಸವಿಲ್ಲ. ಅದರ ಮೇಲೆ ಆಸೆಯೂ ಇಲ್ಲ. ಸಾಮಾಜಿಕ ನ್ಯಾಯದ ಪರ ನನ್ನ ಧ್ವನಿಯನ್ನು ಎಂದೂ ಅಡಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News