×
Ad

ನೀತಿಸಂಹಿತೆ ಉಲ್ಲಂಘನೆ ಆರೋಪ: ಡಿ.ಕೆ. ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲು

Update: 2024-04-20 21:09 IST

ಡಿ.ಕೆ. ಶಿವಕುಮಾರ್

ಬೆಂಗಳೂರು: ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಇಲ್ಲಿನ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿರುವುದು ವರದಿಯಾಗಿದೆ.

ಇತ್ತೀಚಿಗೆ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಯಶವಂತಪುರದ ಗೋಲ್ಡನ್ ಗ್ರಾಂಡ್ ಅಪಾಟ್ಮೆರ್ಂಟ್ ಸೇರಿ ವಿವಿಧೆಡೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ತಮ್ಮ ಸಹೋದರ ಡಿ.ಕೆ.ಸುರೇಶ್ ಪರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತಯಾಚಿಸಿದ್ದರು.

ಈ ವೇಳೆ ಮಾತನಾಡಿದ್ದ ಅವರು ‘ನಮ್ಮ ಮೇಲೆ ವಿಶ್ವಾಸವಿರಿಸಿದರೆ, ನಾವು ಮುಂದೆ ನಿಂತು ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ. ದಿಲ್ಲಿಯಿಂದ ನಿಮ್ಮ ಸಮಸ್ಯೆ ಬಗೆಹರಿಯುವುದಿಲ್ಲ. ಅಪಾಟ್ಮೆರ್ಂಟ್ ನಿವಾಸಿಗಳು ತಮ್ಮ ಮತಗಳನ್ನು ಡಿ.ಕೆ.ಸುರೇಶ್ ಅವರಿಗೆ ಹಾಕಬೇಕು. ನಮ್ಮ ಗ್ಯಾರಂಟಿ ನಾವು ಮಾಡಿದ್ದೇವೆ, ನಿಮ್ಮ ಗ್ಯಾರಂಟಿ ನೀವು ಮಾಡಿ' ಎಂದಿದ್ದರು ಅನ್ನುವ ಆರೋಪ ಕೇಳಿಬಂದಿತ್ತು.

ಉಪಮುಖ್ಯಮಂತ್ರಿಯವರು ಮತದಾರರಿಗೆ ಆಮಿಷವೊಡ್ಡಿ ಹಾಗೂ ಅನಾನುಕೂಲದ ಒತ್ತಡ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಈ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಮಾಹಿತಿ ಪಡೆದಿರುವ ಆರ್.ಎಂ.ಸಿ ಯಾರ್ಡ್ ಠಾಣಾ ಪೊಲೀಸರು, ಡಿ.ಕೆ ಶಿವಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 171(ಬಿ)(ಸಿ)(ಈ)(ಎಫ್)ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News