×
Ad

ಕಾವೇರಿ ಜಲ ವಿವಾದ: ವಿಧಾನಸೌಧದಲ್ಲಿ ಸರ್ವಪಕ್ಷಗಳ ತುರ್ತು ಸಭೆ

Update: 2023-09-13 14:05 IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾವೇರಿ ಜಲ ವಿವಾದ ಕುರಿತಂತೆ ಸರ್ವಪಕ್ಷಗಳ ತುರ್ತು ಸಭೆ ನಡೆಸಿ ಚರ್ಚಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್‌.ಕೆ.ಪಾಟೀಲ, ಚೆಲುವರಾಯಸ್ವಾಮಿ, ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಎನ್‌.ಎಸ್. ಭೋಸರಾಜು, ಕೆ.ವೆಂಕಟೇಶ್‌, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ಈ ಭಾಗದ ಸಂಸದರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಕಾನೂನು ತಜ್ಞರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಗೋವಿಂದರಾಜು ಭಾಗವಹಿಸಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News