×
Ad

ಕಾವೇರಿ ನದಿ ನೀರು ಹಂಚಿಕೆ ವಿವಾದ: ನಾಳೆ(ಸೆ.20) ದಿಲ್ಲಿಯಲ್ಲಿ ಸಭೆ

Update: 2023-09-19 15:47 IST

ಬೆಂಗಳೂರು, ಸೆ.19: ಕಾವೇರಿ ನದಿ ನೀರು ಹಂಚಿಕೆ ವಿವಾದ, ಕೇಂದ್ರ ಸರಕಾರದ ಮುಂದೆ ಬಾಕಿಯಿರುವ ರಾಜ್ಯದ ಯೋಜನೆಗಳು ಹಾಗೂ ಬರ ಪರಿಹಾರ ವಿಷಯಗಳಿಗೆ ಸಂಬಂಧಿಸಿ ಚರ್ಚಿಸಲು ದಿಲ್ಲಿಯ ತಾಜ್ ಮಾನ್ ಸಿಂಗ್ ಹೋಟೆಲ್ ನಲ್ಲಿ ಸೆ.20ರಂದು ಬೆಳಗ್ಗೆ ಸಭೆ ಆಯೋಜಿಸಲಾಗಿದೆ.

ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರದ ಸಚಿವರು, ಸಂಸದರು ಹಾಗೂ ರಾಜ್ಯ ಸಭಾ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ‌‌.ಕೆ ಶಿವಕುಮಾರ್ ಇಂದು ಸಂಜೆ ಹೊಸದಿಲ್ಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News