ಕರ್ನಾಟಕಕ್ಕೆ ಮತ್ತೆ ಕಾವೇರಿ ಆಘಾತ: CWRC ಆದೇಶ ಎತ್ತಿಹಿಡಿದ CWMA
ತಮಿಳುನಾಡಿಗೆ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸಲು ಆದೇಶ
Update: 2026-07-30 16:40 IST
ಬೆಂಗಳೂರು : ತಮಿಳುನಾಡಿಗೆ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ(CWMA) ಗುರುವಾರ ನಿರ್ದೇಶನ ನೀಡಿದೆ. ಆ ಆಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿ(CWRC)ಯ ಶಿಫಾರಸ್ಸನ್ನು ಎತ್ತಿ ಹಿಡಿದಿದೆ.
ರಾಜ್ಯದಲ್ಲಿ ನೀರಿಲ್ಲದ ಕಠಿಣ ಪರಿಸ್ಥಿತಿಯ ಕುರಿತು ಕರ್ನಾಟಕದ ಅಧಿಕಾರಿಗಳು ಪ್ರಬಲವಾದ ವಾದ ಮಂಡಿಸಿದರೂ ಅದಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ತೀವ್ರ ಮಳೆ ಕೊರತೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ಜನಸಾಮಾನ್ಯರು ಹಾಗೂ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯ ನಡುವೆಯೂ ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಕಾವೇರಿ ಆಘಾತ ಎದುರಾಗಿದೆ.