ಐಎಂಎ: ಅಜಯ್ ಹಿಲೋರಿ ವಿರುದ್ಧದ ಸಿಬಿಐ ಪ್ರಕರಣ ಹೈಕೋರ್ಟ್‍ನಿಂದ ರದ್ದು
Update: 2023-07-28 22:54 IST
ಬೆಂಗಳೂರು: ಐ ಮಾನಿಟರಿ ಅಡ್ವೈಸರಿ(ಐಎಂಎ) ಹಗರಣ ಸಂಬಂಧ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಈಗಾಗಲೇ ಇಲಾಖಾ ವಿಚಾರಣೆಯಲ್ಲಿ ದೋಷಮುಕ್ತಗೊಳಿಸಿದ್ದ ಹಿನ್ನೆಲೆ ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ಅವರು ಐಎಂಎ ವಂಚನೆ ಹಗರಣದಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದ ಆರೋಪ ಕೇಳಿಬಂದಿತ್ತು. ಅಕ್ರಮಗಳನ್ನು ಮುಚ್ಚಿಡಲು ಐಎಂಎ ಕಂಪೆನಿಯ ನಿರ್ದೇಶಕ ನಿಜಾಮುದ್ದೀನ್ ಮತ್ತು ಇತರರಿಂದ ಲಂಚ ಪಡೆದಿದ್ದರು. ಆ ಮೂಲಕ ಐಎಂಎ ಅಕ್ರಮ ಮುಂದುವರೆಯಲು ಅಜಯ್ ಹಿಲೋರಿ ನೆರವಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು.