×
Ad

ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ವಿರುದ್ಧ ಮೇಲ್ಮನವಿ ಸಲ್ಲಿಸಲು ಪೊಲೀಸರು ತಯಾರಿ

Update: 2025-03-12 20:14 IST

ಬೆಂಗಳೂರು: ಮಾದಕ ಪದಾರ್ಥಗಳನ್ನು ಸರಬರಾಜು ಮಾಡುತ್ತಿದ್ದ ಆರೋಪದಡಿ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ ಪ್ರಮುಖರ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ಸಿಸಿಬಿ ಪೊಲೀಸರು ತಯಾರಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಪಟ್ಟಿಯಲ್ಲಿ ಸಾಕ್ಷ್ಯಾಧಾರಗಳು ಮತ್ತು ಇತರೆ ಆರೋಪಿಗಳ ಹೇಳಿಕೆಗಳನ್ನು ಹೊರತುಪಡಿಸಿದರೆ ಅರ್ಜಿದಾರರು ಪಾರ್ಟಿಗಳನ್ನು ಆಯೋಜನೆ ಮಾಡುವುದು ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡಿರುವ ಸಂಬಂಧ ತನಿಖಾಧಿಕಾರಿಗಳು ಯಾವುದೇ ಸಾಕ್ಷ್ಯಾಧಾರ ಒದಗಿಸಿಲ್ಲ. ಹೀಗಾಗಿ, ಅರ್ಜಿದಾರರ ವಿರುದ್ದ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆ ಮುಂದುವರೆಯುವುದು ಕಾನೂನಿನ ದುರ್ಬಳಕೆಯಾಗುತ್ತದೆ ಎಂದಿದ್ದ ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿತ್ತು.

ಈ ಬಗ್ಗೆ ಗೃಹ ಮತ್ತು ಕಾನೂನು ಇಲಾಖೆಯ ಸಮ್ಮತಿ ಪಡೆದಿರುವ ಸಿಸಿಬಿ ಅಧಿಕಾರಿಗಳು ಹೈಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀಂ ಕೋರ್ಟ್‍ನಲ್ಲಿ ಶೀಘ್ರದಲ್ಲಿಯೇ ಮೇಲ್ಮನವಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ಸಿಸಿಬಿ ಪೊಲೀಸ್ ಅಧಿಕಾರಿವೊಬ್ಬರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News