ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ರೌಡಿಶೀಟರ್ ಮನೆಗಳ ಮೇಲೆ ಸಿಸಿಬಿ ದಾಳಿ: ಮಾರಕಾಸ್ತ್ರ ವಶಕ್ಕೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ನ.9: ನಗರದ 20ಕ್ಕೂ ಹೆಚ್ಚು ರೌಡಿಶೀಟರ್ ಮನೆಗಳ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬುಧವಾರ ದಾಳಿ ನಡೆಸಿ, ಮನೆಯಲ್ಲಿದ್ದ ಮಾರಕಾಸ್ತ್ರಗಳು ಹಾಗೂ ಕೆಲ ದಾಖಲೆಗಳನ್ನು ವಶಕ್ಕೆ ಪಡೆದಿರುವುದು ವರದಿಯಾಗಿದೆ.
ರೌಡಿಶೀಟರ್ ಗಳಾದ ರಮೇಶ್, ಜಗದೀಶ್ ಅಲಿಯಾಸ್ ಟಾಮಿ ಸೇರಿ 20ಕ್ಕೂ ಹೆಚ್ಚು ರೌಡಿ ಶೀಟರ್ ಗಳ ಮನೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಲಾಗಿದೆ. ವಾರೆಂಟ್ ಜಾರಿಯಾಗಿದ್ದರೂ, ನ್ಯಾಯಾಲಯಕ್ಕೆ ಕೆಲ ರೌಡಿಗಳು ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದರು. ಹೀಗಾಗಿ ಸಿಸಿಬಿ ಪೊಲೀಸರು ನಗರದ ಎಲ್ಲಾ ವಿಭಾಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಎಂದು ತಿಳಿ್ದು ಬಂದಿದೆ.
ಇದೇ ವೇಳೆ ಕೆಲ ರೌಡಿಗಳ ಮನೆಯಲ್ಲಿ ಚೆಕ್, ಸಹಿ ಪಡೆದಿರುವ ಕಾಗದಗಳು ಪತ್ತೆಯಾಗಿದ್ದು, ರೌಡಿಗಳು ಬಡ್ಡಿ ವ್ಯವಹಾರ ಮತ್ತು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವುದು ಸಹ ತಿಳಿದು ಬಂದಿದೆ. ಇದರ ಸಂಬಂಧ ಮತ್ತಷ್ಟು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.