×
Ad

ಕೇಂದ್ರ ವಕ್ಫ್‌ ತಿದ್ದುಪಡಿ ಕಾಯ್ದೆಗೆ ರಾಜ್ಯ ವಕ್ಫ್‌ ಬೋರ್ಡ್ ವಿರೋಧ ; ಸಿಎಂಗೆ ಮನವಿ

Update: 2024-08-29 17:02 IST

ಬೆಂಗಳೂರು : ಕೇಂದ್ರದ ಉದ್ದೇಶಿತ ವಕ್ಫ್‌ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ರಾಜ್ಯ ವಕ್ಫ್‌ ಬೋರ್ಡ್ ವಿರೋಧ ವ್ಯಕ್ತಪಡಿಸಿದೆ.

ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್, ರಾಜ್ಯ ವಕ್ಫ್‌ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ನೇತೃತ್ವದಲ್ಲಿ ನಡೆದ ವಕ್ಫ್‌ ಬೋರ್ಡ್ ಆಡಳಿತ ಮಂಡಳಿ ಸಭೆಯಲ್ಲಿ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಳ್ಳಲಾಯಿತು.

ಬಳಿಕ ಸಚಿವ ಝಮೀರ್ ಅಹ್ಮದ್ ಖಾನ್ ಹಾಗೂ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಕುರಿತು ನಿರ್ಣಯದ ಪ್ರತಿ ನೀಡಿ‌, ಕೇಂದ್ರದ ತಿದ್ದುಪಡಿ ಕಾಯ್ದೆ ವಿರೋಧಿಸಿ ಪತ್ರ ಬರೆಯಲು ಮನವಿ ಮಾಡಿತು.

ಮುಂದಿನ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಖಂಡನಾ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಕೋರಲಾಯಿತು.

ವಕ್ಫ್‌ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಸದಸ್ಯರಾದ ಮೌಲನಾ ಶಾಫಿ ಸಾದಿ, ಜಿ .ಯಾಕೂಬ್, ಅಡ್ವೋಕೆಟ್ ರಿಯಾಝ್, ಅಡ್ವೋಕೆಟ್ ಅಸೀಫ್ ಅಲಿ, ಮೌಲಾನಾ ಅಝರ್ ಅಭಿದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News