ಕರ್ನಾಟಕ ಹೈಕೋರ್ಟ್‌ಗೆ 6 ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ
Update: 2026-08-07 23:14 IST
Photo credit: PTI
ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ಆರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಆದೇಶ ಮಾಡಿದೆ.
ರಾಘವೇಂದ್ರ ಸೀತಾರಾಮ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್, ಹೊಂಬೇಗೌಡ ಶಾಂತಿ ಭೂಷಣ ಅವರನ್ನು ರಾಷ್ಟ್ರಪತಿಗಳ ಆದೇಶದ ಮೇರೆಗೆ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕ ಮಾಡಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಜಗನ್ನಾಥ ಶ್ರೀನಿವಾಸನ್ ಅವರು ಆದೇಶ ಹೊರಡಿಸಿದ್ದಾರೆ.
ನೇಮಕಗೊಂಡಿರುವ ಎಲ್ಲ ನ್ಯಾಯಮೂರ್ತಿಗಳೂ ಅಧಿಕಾರ ವಹಿಸಿಕೊಳ್ಳುವ ದಿನಾಂಕದಿಂದ 2 ವರ್ಷಗಳ ಅವಧಿಗೆ ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.