×
Ad

ಎ. 23, 24ರಂದು ಸಿಇಟಿ ಪರೀಕ್ಷೆ; ಜ.17 ರಿಂದ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ

Update: 2026-01-02 14:11 IST

ಬೆಂಗಳೂರು: ಸಿಇಟಿ ಪರೀಕ್ಷೆ ದಿನಾಂಕವು ಪ್ರಕಟಗೊಂಡಿದ್ದು, ಎಪ್ರಿಲ್ 23 ಮತ್ತು 24ರಂದು ಪರೀಕ್ಷೆಗಳು ನಡೆಯಲಿವೆ. ಜನವರಿ 17 ರಿಂದ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಿಳಿಸಿದೆ.

ಎ.23ರ ಬೆಳಿಗ್ಗೆ 10:30 ರಿಂದ 11:50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2:30ರಿಂದ 3:50 ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಎ. 24ರ ಬೆಳಗ್ಗೆ 10:30 ರಿಂದ 11:50ರವರೆಗೆ ಗಣಿತಶಾಸ್ತ್ರ ಮಧ್ಯಾಹ್ನ 2:30ರಿಂದ 3:50 ರವರೆಗೆ ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ.

ಎ.22ರಂದು ಬೆಳಿಗ್ಗೆ 10:30 ರಿಂದ 11:30ರವರೆಗೆ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಬೆಳಗಾವಿ, ವಿಜಯಪುರ ಮತ್ತು ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News