×
Ad

ಸಿಇಟಿ: ಪಠ್ಯಕ್ರಮ ಪ್ರಕಟಿಸಿದ ಕೆಇಎ

Update: 2025-01-18 20:28 IST

ಬೆಂಗಳೂರು: ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ 2025ನೆ ಸಾಲಿನಲ್ಲಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಗೆ ಪಠ್ಯಕ್ರಮವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್‍ಸೈಟ್ https://cetonline.karnataka.gov.in/kea/ ನಲ್ಲಿ ಪ್ರಕಟಿಸಿದೆ.

ಶನಿವಾರ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟನೆ ಹೊರಡಿಸಿದ್ದು, ಪ್ರಥಮ ಮತ್ತು ದ್ವಿತೀಯ ಪಿಯುಸಿಯ ಭೌತವಿಜ್ಞಾನ, ರಸಾಯನ ವಿಜ್ಞಾನ, ಗಣಿತ ಮತ್ತು ಜೀವವಿಜ್ಞಾನ ವಿಷಯಗಳ ಪಠ್ಯಕ್ರಮವನ್ನು ವೆಬ್‍ಸೈಟ್‍ನಲ್ಲಿ ಹಾಕಿದ್ದು, ಅದನ್ನು ನೋಡಿಕೊಂಡೇ ಪರೀಕ್ಷೆಗೆ ತಯಾರಿ ನಡೆಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಎನ್‍ಸಿಆರ್‍ಟಿಸಿ ಪಠ್ಯಕ್ರಮ ಹಾಗೂ ಶಾಲಾ ಶಿಕ್ಷಣ(ಪಿಯು) ಇಲಾಖೆ ಪ್ರಕಟಿಸಿರುವ ಪಠ್ಯ ಪುಸ್ತಕಗಳನ್ನು ಆಧಾರವಾಗಿ ಇಟ್ಟುಕೊಂಡೇ ಈ ಪಠ್ಯಕ್ರಮ ರಚಿಸಲಾಗಿದೆ. ಇದನ್ನು ಪಿಯು ಕಾಲೇಜುಗಳ ವಿಷಯ ತಜ್ಞರಿಂದಲೂ ಪರಿಶೀಲನೆ ಮಾಡಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News