×
Ad

ಚೈತ್ರಾ ಕುಂದಾಪುರ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ವಶಕ್ಕೆ

Update: 2023-09-14 16:49 IST

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ, ಬಿಜೆಪಿ ಮುಖಂಡರೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪದಡಿ ಮತ್ತೋರ್ವ ಆರೋಪಿಯನ್ನು ಬೆಂಗಳೂರು ಸಿಸಿಬಿ ವಿಭಾಗದ ಪೊಲೀಸರು ಗುರುವಾರ  ವಶಕ್ಕೆ ಪಡೆದುಕೊಂಡಿರುವ ಬಗ್ಗೆ ವರದಿಯಾಗಿದೆ.

ಪ್ರಕರಣದ 5ನೇ ಆರೋಪಿ ನಾಯ್ಕ್‌ ನನ್ನು ಬೆಂಗಳೂರು ನಗರದ ಯಶವಂತಪುರ ಬಳಿ ವಶಕ್ಕೆ ಪಡೆದಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣದಲ್ಲಿ ಈತ 5ನೇ ಆರೋಪಿಯಾಗಿದ್ದು, ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯನಂತೆ ನಟಿಸಿದ್ದ ಈತ ಬೆಂಗಳೂರಿನ ಕೆ.ಆರ್.ಪುರಂನಲ್ಲಿ ಚಿಕನ್ ಕಬಾಬ್ ತಯಾರಿಸುವ ಬೀದಿ ವ್ಯಾಪಾರಿಯಾಗಿದ್ದ ಎಂದು ದೂರು ದಾರ ಗೋವಿಂದ ಬಾಬು ಅವರು ದೂರಿನಲ್ಲಿ ತಿಳಿಸಿದ್ದಾರೆ.   

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News