×
Ad

ಚೈತ್ರಾ ಕುಂದಾಪುರ ಪ್ರಕರಣ: ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಹಾಲಶ್ರೀ ಸ್ವಾಮೀಜಿ

Update: 2023-09-15 22:15 IST

ಬೆಂಗಳೂರು, ಸೆ.15: ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ 5 ಕೋಟಿ ರೂ. ವಂಚಿಸಿದ್ದ ಪ್ರಕರಣದಲ್ಲಿ 3ನೇ ಆರೋಪಿ ಆಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿಯ ಹಾಲುಶ್ರೀ ಮಠದ ಅಭಿನವ ಹಾಲವೀರಪ್ಪಶ್ರೀ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಅಭಿನವ ಹಾಲಶ್ರೀ ಪರ ವಕೀಲರು ನಗರದ 57ನೆ ಸಿಸಿಹೆಚ್ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಈ ಜಾಮೀನು ಅರ್ಜಿ ವಿಚಾರಣೆ ಇಂದು(ಸೆ.16) ನಡೆಯಲಿದೆ.

ವಂಚನೆ ಪ್ರಕರಣದಲ್ಲಿ ಹೆಸರು ಕೇಳಿಬಂದ ಬೆನ್ನಲ್ಲೇ ಹಾಲಶ್ರೀ ನಾಪತ್ತೆಯಾಗಿದ್ದು, ಅಜ್ಞಾತ ಸ್ಥಳದಲ್ಲಿ ಅಡಗಿರುವ ಅವರ ಪತ್ತೆಗೆ ಸಿಸಿಬಿ ಪೊಲೀಸರು ತೀವ್ರ ಪ್ರಯತ್ನ ನಡೆಸಿದ್ದು, ಗುರುವಾರ ಸಿಸಿಬಿ ಪೊಲೀಸರು ಹಿರೇಹಡಗಲಿಯಲ್ಲಿರುವ ಮಠಕ್ಕೆ ಹೋಗಿ ನೋಟಿಸ್ ಅಂಟಿಸಿ ಬಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News