×
Ad

ಮುಡಾ ನಿವೇಶನ ವಾಪಸ್ | ಮಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗಿದ್ಯಾಕೆ? : ಛಲವಾದಿ ನಾರಾಯಣಸ್ವಾಮಿ

Update: 2024-10-01 17:36 IST

ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ʼಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಸಿಕ್ಕಿಬಿದ್ದಿದ್ದಾರೆ. ಜಗ್ಗುವುದಿಲ್ಲ, ಬಗ್ಗುವುದಿಲ್ಲ. ಏನೇ ಬಂದ್ರೂ ಎದುರಿಸ್ತೀನಿ ಎಂದವರು ನಿನ್ನೆ ಕತ್ತಲಾದ ಮೇಲೆ ಬಗ್ಗಿದ್ಯಾಕೆ?’ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.

ಮಂಗಳವಾರ ಇಲ್ಲಿನ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇದರಿಂದ ಅವರ ಕಪಟತನ ಎಂತಹದ್ದೆಂದು ಅರ್ಥವಾಗುತ್ತದೆ. ನಿನ್ನೆ 14 ಸೈಟ್ ವಾಪಸ್ ಮಾಡಿದ್ದಾಗಿ ಪತ್ರ ಕೊಟ್ಟಿದ್ದಾರೆ. ಆ ಪತ್ರದಲ್ಲಿ ದಿನಾಂಕವೂ ಇಲ್ಲ, ಆದ್ದರಿಂದ ಅದು ಖಾತ್ರಿಯೇನಲ್ಲ ಎಂದು ತಿಳಿಸಿದರು.

ಹಳ್ಳಿಕಡೆ ‘ನೂರು ಬಾರಿ ಕದ್ದೋನು ಒಂದು ಸಾರಿಯಾದ್ರೂ ಸಿಗಲೇಬೇಕು’ ಎಂಬ ಗಾದೆ ಇದೆ. ಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಚಾ ಅಲ್ಲ. ನೂರಾರು ಬಾರಿ ಕದ್ದವರು ಒಂದು ಸಾರಿ ಸಿಕ್ಕಿ ಹಾಕಿಕೊಳ್ತಾರಲ್ವ? ಒಂದು ಸಾರಿ ಸಿಕ್ಕಿದರೂ ನೂರು ಬಾರಿ ಮಾಡಿದ ಹಾಗೇ ಎಂದು ಅವರು ವಿಶ್ಲೇಷಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News