×
Ad

ಭ್ರಷ್ಟಾಚಾರ ಮರೆಮಾಚಲು ‘ಜಾತಿಗಣತಿ’ ಚರ್ಚೆ : ಛಲವಾದಿ ನಾರಾಯಣಸ್ವಾಮಿ

Update: 2025-01-15 19:52 IST

ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ರಾಜ್ಯ ಸರಕಾರದ ಭ್ರಷ್ಟಾಚಾರ, ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯಗಳನ್ನು ಮರೆಮಾಚಲು ಉದ್ದೇಶದಿಂದ ಜಾತಿಗಣತಿಯ ಚರ್ಚೆಯನ್ನು ಮುಂದಕ್ಕೆ ತಂದಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್‍ನಲ್ಲೆ ಜಾತಿಗಣತಿಗೆ ಡಿ.ಕೆ.ಶಿವಕುಮಾರ್, ಶಾಮನೂರು ಶಿವಶಂಕರಪ್ಪ ವಿರೋಧ ಮಾಡುತ್ತಿದ್ದಾರೆ. ಕಾಂತರಾಜ್ ವರದಿಯಲ್ಲಿ ಏನಿದೆಯೋ ಅದನ್ನೇ ಜಯಪ್ರಕಾಶ್ ಹೆಗ್ಡೆಯವರೂ ಕೊಟ್ಟಿದ್ದಾರೆ. ಅಂದಮೇಲೆ ಹಲವು ವರ್ಷಗಳಲ್ಲಿ ಏನು ಬದಲಾವಣೆ ಆಗಿದೆ? ವಾಸ್ತವವಾಗಿ ಪರಿಶಿಷ್ಟರ ಜನಸಂಖ್ಯೆ ಈಗ ಸುಮಾರು 1.50 ಕೋಟಿ ಇದ್ದರೂ ಅದನ್ನು 1 ಕೋಟಿ 8 ಲಕ್ಷ ಎಂದೇ ತೋರಿಸಿದ್ದಾರೆ ಎಂದು ಟೀಕಿಸಿದರು.

ಮುಂದಿನ ಎಪ್ರಿಲ್, ಮೇ ನಲ್ಲಿ ಜನಗಣತಿ ನಡೆಯಲಿದೆ. ಆಗ ಸರಿಯಾದ ಅಂಕಿ-ಅಂಶ ಸಿಗಲಿದೆ. ಕಾಂಗ್ರೆಸ್ ನಡೆಸಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿಯೇ ಹೊರತು ಜಾತಿಗಣತಿ ಅಲ್ಲ. ಇದಕ್ಕೆ ನಮ್ಮ ವಿರೋಧ ಇಲ್ಲ, ಎಲ್ಲವನ್ನೂ ಗಣನೆಗೆ ತೆಗೆದುಕೊಂಡು, ತಾರತಮ್ಯ ಮಾಡದೆ ಇದ್ದರೆ ಇದನ್ನು ಒಪ್ಪಬಹುದು ಎಂದು ನಾರಾಯಣಸ್ವಾಮಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News