×
Ad

ಕಾಂಗ್ರೆಸ್ ಸಂಪೂರ್ಣ ಕಮ್ಯುನಿಸ್ಟರ ಪಕ್ಷವಾಗಿದೆ : ಛಲವಾದಿ ನಾರಾಯಣಸ್ವಾಮಿ

‘ಧರ್ಮಸ್ಥಳ ಪ್ರಕರಣ’ ಸಿಎಂ ಕ್ಷಮೆಯಾಚಿಸಲು ಆಗ್ರಹ

Update: 2025-08-16 18:42 IST

ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು, ಆ. 16: ಧರ್ಮಸ್ಥಳದ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನರ ಕ್ಷಮೆ ಕೇಳಿ, ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಶನಿವಾರ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಎಷ್ಟು ಅಗೆದರೂ ಅಲ್ಲಿ ಏನೂ ಸಿಗದ ಕಾರಣ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶ್ರೀಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಹೇಳುತ್ತಿದ್ದಾರೆ. ಮುಖಂಡ ಡಿ.ಕೆ.ಸುರೇಶ್ ಧರ್ಮಸ್ಥಳ ಧಾರ್ಮಿಕ ಭಾವನೆಗಳ ಕ್ಷೇತ್ರ. ಈ ರೀತಿಯ ಘಟನೆ ಆಗಬಾರದಾಗಿತ್ತು ಎಂದು ಹೇಳುತ್ತಿದ್ದಾರೆ ಎಂದು ಉಲ್ಲೇಖಿಸಿದರು.

ಕಾಂಗ್ರೆಸ್‍ನವರು ಧರ್ಮಸ್ಥಳದಲ್ಲಿ ತನಿಖೆ ನಡೆಸಿ ಏನೂ ಸಿಗಲಿಲ್ಲ. ತಪ್ಪು ಮಾಡಿ ಸಿಕ್ಕಿಹಾಕಿಕೊಂಡಿದ್ದೇವೆ. ಅದಕ್ಕಾಗಿ ನಿರೀಕ್ಷಣಾ ಜಾಮೀನು ಪಡೆಯುವ ರೀತಿಯಲ್ಲಿ ಧರ್ಮಸ್ಥಳ ಪ್ರಕರಣ ಒಂದು ಷಡ್ಯಂತ್ರ. ಇದಕ್ಕೆ ಕಮ್ಯುನಿಸ್ಟರು ಕಾರಣ. ಅವರ ಒತ್ತಾಯದ ಮೇಲೆ ನಾವು ಎಸ್‍ಐಟಿಯನ್ನು ರಚಿಸಿದ್ದೇವೆಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ ಎಂದು ತಿಳಿಸಿದರು.

ಸರಕಾರ ಆರ್‌ಸಿಬಿ ಕಾಲ್ತುಳಿತದ ಘಟನೆಯಲ್ಲಿ ಮಾಡಿದ ತಪ್ಪನ್ನೇ ಧರ್ಮಸ್ಥಳ ವಿಚಾರದಲ್ಲಿ ಎಡವಟ್ಟನ್ನು ಮಾಡುವುದಕ್ಕೆ ಹೊರಟಿದೆ. ಧರ್ಮಸ್ಥಳ ಒಂದು ಪವಿತ್ರ ಧಾರ್ಮಿಕ ಸ್ಥಳ. ರಾಜ್ಯದ ಸಾಮಾನ್ಯ ಜನರೂ ಮಂಜುನಾಥನ ಕೃಪೆಗೆ ಪಾತ್ರರಾಗಿ ಭಕ್ತಿಯಿಂದ ದರ್ಶನ ಪಡೆಯುವ ಕಾರ್ಯವನ್ನು ಕಾಲದಿಂದಲೂ ಮಾಡಿಕೊಂಡು ಬಂದಿದ್ದಾರೆ. ಆದರೆ, ಒಂದು ಧಾರ್ಮಿಕ ಸ್ಥಳದ ವಿಚಾರದಲ್ಲಿ ತಪ್ಪು ಕಲ್ಪನೆ ಮತ್ತು ಅಪವಾದ ಮಾಡಲು ಇಂದು ಕೆಲವರು ಪ್ರಚೋದನೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷವಾಗಿ ಉಳಿದಿಲ್ಲ. ಅದು ಕಮ್ಯುನಿಸ್ಟ್ ಕಾಂಗ್ರೆಸ್ ಪಕ್ಷವಾಗಿ ಕೆಲಸ ಮಾಡುವುದಕ್ಕೆ ಪ್ರಾರಂಭಿಸಿದೆ. ಕಮ್ಯುನಿಸ್ಟ್ ಚಿಂತನೆಗಳನ್ನು ಅವರು ಪೈಪೋಟಿಯಿಂದ ಮುಖ್ಯಮಂತ್ರಿ ಮೂಲಕ ಮಾಡಿಸುವುದಕ್ಕೆ ಹೊರಟಿದ್ದಾರೆ. ಈ ಕಾರಣದಿಂದ ಧರ್ಮಸ್ಥಳದಲ್ಲಿ ಅನಾಮಿಕ ವ್ಯಕ್ತಿ ಹುಟ್ಟಿಕೊಂಡಿದ್ದಾನೆ ಎಂದು ತಿಳಿಸಿದರು.

ಅನಾಮಿಕ ವ್ಯಕ್ತಿಯನ್ನು ಮುಂದಿಟ್ಟು ಧರ್ಮಸ್ಥಳದಲ್ಲಿ 13 ಸ್ಥಳಗಳನ್ನು ಗುರುತಿಸಿ, ಆ ಸ್ಥಳಗಳಲ್ಲಿ ನಾವು ಹೆಣಗಳನ್ನು ಹೂತು ಹಾಕಿದ್ದೇವೆ. ಇದೆಲ್ಲವನ್ನು ಅಗೆದು ತೆಗೆದರೆ ನಾವು ಸಾಕ್ಷಿ ತೋರಿಸುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಒಬ್ಬ ಅನಾಮಿಕ ವ್ಯಕ್ತಿ ದೂರು ನೀಡಿದಾಗ ಮೊದಲು ಅವನನ್ನು ಬಂಧಿಸಿ ಎಫ್‍ಐಆರ್ ಹಾಕಿ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿ ಅವನನ್ನು ಜೈಲಿಗೆ ಕಳುಹಿಸಬೇಕು ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News