×
Ad

ಚಾಮರಾಜನಗರ | ಕಲುಷಿತ ಆಹಾರ ಸೇವಿಸಿ 24 ವಿದ್ಯಾರ್ಥಿಗಳು ಅಸ್ವಸ್ಥ; ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಅಮಾನತು

Update: 2023-07-20 10:48 IST

ಗುಂಡ್ಲುಪೇಟೆ (ಚಾಮರಾಜನಗರ): ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಹಾರ ಸೇವಿಸಿ 24 ಮಕ್ಕಳು ಅಸ್ವಸ್ಥರಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. 

ಪ್ರಾಂಶುಪಾಲ ಎಂ.ಕುಮಾರಸ್ವಾಮಿ ಅವರನ್ನು ಅಮಾನತು ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಆದೇಶ ಹೊರಡಿಸಿದೆ.

ಜು.18 ರಂದು (ಮಂಗಳವಾರ) ಕಲುಷಿತ ಆಹಾರ ಸೇವಿಸಿ ಒಟ್ಟು 24 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳನ್ನು ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News