×
Ad

ಚಾಮರಾಜನಗರ | ಕಬ್ಬು ತುಂಬಿಕೊಂಡು ಹೊಗುತ್ತಿದ್ದ ಲಾರಿಗೆ ವಿದ್ಯುತ್ ತಂತಿ ಸ್ಪರ್ಶ: ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತ್ಯು

Update: 2023-09-09 15:23 IST

ಚಾಮರಾಜನಗರ : ಕಬ್ಬು ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಜಲಾಶಯ ರಸ್ತೆಯ ದುರ್ಗಮ್ಮನ ದೇವಸ್ಥಾನದ ಬಳಿ ಶನಿವಾರ ವರದಿಯಾಗಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಂಗರಪುರ ಗ್ರಾಮದ ನಿವಾಸಿಗಳಾದ ಲಾರಿ ಕ್ಲೀನರ್ ಚಿನ್ನು ಮತ್ತು ಲಾರಿ ಚಾಲಕ ಹಾಗೂ ಮಾಲಕ ಪ್ರಕಾಶ್ ಮೃತರು ಎಂದು ಗುರುತಿಸಲಾಗಿದೆ.

ಗುಂಡಾಲ್ ಜಲಾಶಯ ಸಮೀಪದ ಸಿದ್ದಪ್ಪ ಎಂಬುವರ ಜಮೀನಿನಲ್ಲಿ ಕಬ್ಬು ತುಂಬಿಕೊಂಡು ತೆರಳುವಾಗ ದುರ್ಗಮ್ಮನ ದೇವಸ್ಥಾನ ಹತ್ತಿರ ರಸ್ತೆ ಬದಿಯಲ್ಲಿ ಹಾದು ಹೋಗಿರುವ ಹೈ ಪವರ್ ವಿದ್ಯುತ್ ತಂತಿ ತಗುಲಿದೆ ಎನ್ನಲಾಗಿದೆ. ಈ ವೇಳೆ ಚಿನ್ನು ಹಾಗೂ ಪ್ರಕಾಶ್ ಲಾರಿಯಿಂದ ಹೊರಗಿಳಿದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾದರೂ ಪ್ರಯತ್ನ ವಿಫಲವಾಗಿದೆ ಎಂದು ಹೇಳಲಾಗಿದೆ. ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News