×
Ad

ʼಚಾಂಪಿಯನ್ಸ್‌ ಟ್ರೋಫಿʼ ಗೆದ್ದ ಭಾರತ ತಂಡವನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

Update: 2025-03-09 23:25 IST

ಬೆಂಗಳೂರು : ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಯಲ್ಲಿ ನ್ಯೂಝಿಲ್ಯಾಂಡ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್‌ ಪಟ್ಟ ಅಲಂಕರಿಸಿರುವ ಭಾರತ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಸಂತಸ ಹಂಚಿಕೊಂಡಿರುವ ಸಿಎಂ, ಅಮೋಘ‌ ಆಟದ ಮೂಲಕ ಭಾರತ ತಂಡ ಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು. ಬೌಲಿಂಗ್, ಬ್ಯಾಟಿಂಗ್, ಕ್ಷೇತ್ರರಕ್ಷಣೆ ಹೀಗೆ ಎಲ್ಲಾ ವಿಭಾಗಗಳಲ್ಲೂ ನಮ್ಮವರ ಆಟ ಹುಬ್ಬೇರಿಸುವಂತಿತ್ತು. ಪ್ರತಿ ಪಂದ್ಯದಲ್ಲೂ ರನ್ ಗಳಿಸುತ್ತಾ, ನಿರಂತರವಾಗಿ ತಂಡವನ್ನು ಗೆಲುವಿನ ದಡ ಸೇರಿಸುತ್ತಿರುವ ನಾಡಿನ ಮನೆಮಗ ಕೆ.ಎಲ್. ರಾಹುಲ್ ಆಟ ಹೆಚ್ಚು ಖುಷಿಕೊಟ್ಟಿದೆ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News