×
Ad

ಭಾರೀ ಮಳೆಯಾಗುವ ಸಾಧ್ಯತೆ | ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Update: 2024-10-24 21:32 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಚಂಡಮಾರುತಗಳ ಪ್ರಭಾವ ಕಡಿಮೆಯಾಗಿದ್ದು, ದಕ್ಷಿಣ ಒಳನಾಡಿನ ಮಂಡ್ಯ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಉತ್ತರ ಕನ್ನಡ ಜಿಲ್ಲೆಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲೀನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಸಾಧಾರಣ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ಮತ್ತು 20 ಡಿಗ್ರಿ ದಾಖಲಾಗಲಿದೆ. ನಿನ್ನೆಯಿಂದ 13.6 ಎಂಎಂ ಮಳೆ ನಗರದಲ್ಲಿ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News