ರಾಜ್ಯದಲ್ಲಿ ನ.23ರಿಂದ 3 ದಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ
Update: 2023-11-20 19:45 IST
ಸಾಂದರ್ಭಿಕ ಚಿತ್ರ
ಬೆಂಗಳೂರು, ನ.20: ರಾಜ್ಯದಲ್ಲಿ ಮತ್ತೆ ಹಿಂಗಾರು ಚುರುಕುಗೊಳ್ಳಲಿದ್ದು, ನ.23ರಿಂದ ಮೂರು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಒಣಹವೆ ವಾತಾವರಣ ಕಂಡು ಬಂದಿದೆ. ಹಿಂಗಾರು ಮಳೆ ಸಹ ಕ್ಷೀಣವಾಗಿತ್ತು. ಇದೀಗ ನ.23ರಿಂದ ನ.26ರವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ನ.23 ಹಾಗೂ 24ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.