ಹೊಳೆನರಸೀಪುರಕ್ಕೆ ಚೆನ್ನಮ್ಮ ಪಾರ್ಥಿವ ಶರೀರ ಅಂತಿಮ ಯಾತ್ರೆ
ಬೆಂಗಳೂರು: ನಿನ್ನೆ ನಿಧನರಾಗಿದ್ದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಬೆಂಗಳೂರಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರದ ವರೆಗೆ ನಡೆಯಿತು.
ಅಂತಿಮ ಯಾತ್ರೆಗೂ ಮುನ್ನ ಇಲ್ಲಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಮೃತರ ಪಾರ್ಥಿವ ಶರೀರವನ್ನು ಇಡಲಾಗಿತ್ತು. ಕುಟುಂಬಸ್ಥರು ಹಾಸನದ ಮಾವಿನಕೆರೆಯಲ್ಲಿ ಮೃತರ ಅಂತ್ಯಕ್ರಿಯೆಯನ್ನು ನಡೆಸಲು ಉದ್ದೇಶಿಸಿರುವುದರಿಂದ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆಯಿತು. ಅಂತಿಮ ಯಾತ್ರೆ ಮಾರ್ಗಮಧ್ಯೆ 10 ಕಡೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ನೆಲಮಂಗಲ ಕ್ರಾಸ್, ಸೋಲೂರು ಕ್ರಾಸ್, ಮರೂರು ಹ್ಯಾಂಡ್ ಪೋಸ್ಟ್, ಕುಣಿಗಲ್ ಕ್ರಾಸ್, ಬೆಳ್ಳೂರು ಕ್ರಾಸ್, ಕದಬಳ್ಳಿ ಕ್ರಾಸ್, ಹಿರಿಸಾವೆ ಕ್ರಾಸ್, ಚನ್ನರಾಯಪಟ್ಟಣ, ಎಲೆಯೂರು, ಶಾಂತಿಗ್ರಾಮ, ಬೂವನಹಳ್ಳಿ ಕ್ರಾಸ್, ಹಾಸನ ಡೈರಿ ಸರ್ಕಲ್, ಎನ್‍ಆರ್ ಸರ್ಕಲ್ ಮತ್ತು ಮೊಸಳೆ ಹೊಸಹಳ್ಳಿ ಬಳಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಯಿತು.