ಬೆಂಗಳೂರು : ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರು ಆಶಾ ಕಾರ್ಯಕರ್ತೆಯರನ್ನು ರಾಜ್ಯ ಸರ್ಕಾರದ ವಿರುದ್ಧ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣ ಸಂಗಮದಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಿನ್ನೆ ನಾನು ನಮ್ಮ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದು, ನಮ್ಮ ಸಚಿವರು ಇಂದು ಆಶಾ ಕಾರ್ಯಕರ್ತೆಯರೊಂದಿಗೆ ಚರ್ಚೆ ಮಾಡಿದ್ದಾರೆ ಎಂದರು.

ಆಶಾ ಕಾರ್ಯಕರ್ತೆಯರಿಗೆ ಸಹಾಯ ಮಾಡಬೇಕು ಎಂದು ಎನ್ ಡಿಎ ನಾಯಕರು ಮುಂದೆ ಬರಲಿಲ್ಲ. ಅವರು ಆಶಾ ಕಾರ್ಯಕರ್ತೆಯರನ್ನು ರಾಜ್ಯ ಸರ್ಕಾರದ ವಿರುದ್ಧ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ 2 ಸಾವಿರ ನೀಡುತ್ತಿರುವುದು ಬಿಟ್ಟರೆ ಬೇರೆ ಏನೂ ನೀಡುತ್ತಿಲ್ಲ. ಆಶಾ ಕಾರ್ಯಕರ್ತೆಯರ ವಿಚಾರದಲ್ಲಿ ನಮ್ಮ ಜವಾಬ್ದಾರಿ ಎಷ್ಟಿದೆಯೋ ಕೇಂದ್ರ ಸರ್ಕಾರದ ಜವಾಬ್ದಾರಿಯೂ ಅಷ್ಟೇ ಇದೆ. ನಾವು ಆಶಾ ಕಾರ್ಯಕರ್ತೆಯರಿಗೆ ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಮೀರ್ ದಳಸನೂರು\ವಾರ್ತಾಭಾರತಿ

ಬೆಂಗಳೂರು ವರದಿಗಾರರು

ಸಮೀರ್ ದಳಸನೂರು ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪದವಿ ಪಡೆದಿದ್ದು, ದೂರದರ್ಶನದ ಚಂದನ ವಾಹಿನಿಯಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ, ಆಕಾಶವಾಣಿಯಲ್ಲೂ ಅರೆಕಾಲಿಕ ಸುದ್ದಿ ವಿಭಾಗದಲ್ಲಿ ಕಾರ್ಯ ನಿರ್ವಹಿಸಿರುವ ಅನುಭವ ಇದೆ. ಪ್ರಸ್ತುತ ಹಲವು ವರ್ಷಗಳಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.