×
Ad

ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ |ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಅಭಿನಂದಿಸಿದ ಮಂಡ್ಯ ಶಾಸಕರ ನಿಯೋಗ

Update: 2025-01-22 19:23 IST

PC : x@DKShivakumar

ಬೆಂಗಳೂರು : ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸಲು ಅನುಮೋದನೆ ನೀಡಿರುವುದು ಹಾಗೂ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್ ಬಿಲ್ 52 ಕೋಟಿ ರೂ. ಮನ್ನಾ ಮಾಡಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಶಾಸಕರು ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಡಣ್ಣಯ್ಯ, ಉದಯಗೌಡ, ರವಿಶಂಕರ್, ಹರೀಶ್ ಗೌಡ, ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ಮೈಷುಗರ್ ಅಧ್ಯಕ್ಷ ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News