×
Ad

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಿಎಸ್ ವೈ ಸಂಬಂಧಿ ಚಿಕ್ಕನಗೌಡರ್

Update: 2023-11-05 22:31 IST

ಬೆಂಗಳೂರು: ಕುಂದಗೋಳ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಚಿಕ್ಕನಗೌಡರ್ ಅವರು ತಮ್ಮ ಬೆಂಬಲಿಗರ ಜೊತೆ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಜಗದೀಶ್ ಶೆಟ್ಟರ್ ಅವರ ಸಮ್ಮುಖದಲ್ಲಿ ಸದಾಶಿವನಗರದ ಡಿ ಕೆ ಶಿವಕುಮಾರ್ ಅವರ ನಿವಾಸದಲ್ಲಿ ರವಿವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 

ಚಿಕ್ಕನಗೌಡರ ಜೊತೆ ಕುಂದಗೋಳ ಹಾಗೂ ಶಿಗ್ಗಾವಿಯ ಬಿಜೆಪಿ ಮುಖಂಡರು ಸಹ ಕಾಂಗ್ರೆಸ್ ಸೇರ್ಪಡೆಯಾದರು. 

ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಸಂಬಂಧಿಯೂ ಆಗಿರುವ ಚಿಕ್ಕನಗೌಡರ್, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್, ಈಗಾಗಲೇ ಮಾಜಿ ಶಾಸಕರಾದ ರಾಮಣ್ಣ ಲಮಾಣಿ, ಎಂ.ಪಿ.ಕುಮಾರಸ್ವಾಮಿಯನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಚಿಕ್ಕನಗೌಡರ್ ಅವರನ್ನು ಕಾಂಗ್ರೆಸ್‌ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದ ಚಿಕ್ಕನಗೌಡರ್, ಕಾಂಗ್ರೆಸ್‌ ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದರು. 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News