×
Ad

ಚಿಕ್ಕಮಗಳೂರು: ನ.4ರಿಂದ 6ರವರೆಗೆ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

Update: 2023-10-27 10:43 IST

ಚಿಕ್ಕಮಗಳೂರು, ಅ.27: ಶ್ರೀರಾಮ ಸೇನೆಯ ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ನವೆಂಬರ್ 4ರ ಬೆಳಗ್ಗೆ 6ರಿಂದ ನ.6ರ ಬೆಳಗ್ಗೆ 10ರವರೆಗೆ ಪ್ರವಾಸಿಗರಿಗೆ ನಿಷೇಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಅಕ್ಟೋಬರ್ 30 ರಿಂದ ನವೆಂಬರ್ 5ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದತ್ತಪೀಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮುಂಜಾಗ್ರತಾ ಕ್ರಮವಾಗಿ ನ.4ರಿಂದ 3 ದಿನಗಳ ಕಾಲ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಪ್ರವಾಸಿಗರಿಗೆ ನಿಷೇಧ ವಿಧಿಸಿ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News