×
Ad

ಚಿಕ್ಕಮಗಳೂರು: ಪತ್ನಿಯನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಶರಣಾದ ಪತಿ

Update: 2023-09-06 00:15 IST

ಚಿಕ್ಕಮಗಳೂರು: ಪತ್ನಿಯನ್ನೇ ವ್ಯಕ್ತಿಯೊಬ್ಬ ಹತ್ಯೆಗೈದಿರುವ ಘಟನೆ ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಮಂಗಳವಾರ ರಾತ್ರಿ ವರದಿಯಾಗಿದೆ.

ಮೃತಳನ್ನ 34 ವರ್ಷದ ಶಮಾಭಾನು ಎಂದು ಗುರುತಿಸಲಾಗಿದೆ. ಪತ್ನಿಯನ್ನ ಕೊಲೆಗೈದ ಪತಿ ಶಬ್ಬೀರ್ ಅಹ್ಮದ್ ನಗರ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಆರೋಪಿ ಶಬ್ಬೀರ್ ಅಹಮದ್ ತನ್ನ ಪತ್ನಿ ಶಮಾಭಾನು ಜೊತೆ ಗೋವಾ ಪ್ರವಾಸ ಹೋಗಿದ್ದನು. ಒಂದು ವಾರಗಳ ಕಾಲ ಗೋವಾದಲ್ಲಿ ಪ್ರವಾಸ ಮುಗಿಸಿ ಬಂದ ಮರುದಿನವೇ ಪತ್ನಿಯನ್ನ ಸುತ್ತಿಗೆಯಿಂದ ಹೊಡೆದು ಕೊಲೆಗೈದಿದ್ದಾನೆನ್ನಲಾಗಿದೆ. 

ಆರೋಪಿಯ ಮೊದಲ ಪತ್ನಿ ಕೊರೋನದಿಂದ ಸಾವನ್ನಪ್ಪಿದ್ದರು. ಹಿರಿಯ ಪತ್ನಿ ಸಾವಿನ ನಂತರ ಕಳೆದ ವರ್ಷ ಶಮಾಭಾನುರನ್ನ ಮದುವೆಯಾಗಿದ್ದನು ಎಂದು ಹೇಳಲಾಗಿದೆ. 

 ಸ್ಥಳಕ್ಕೆ ನಗರ ಪೊಲೀಸರು ಹಾಗೂ ಎಸ್ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News